image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಗ್ಪುರದಲ್ಲಿ ಅಂದಾಜು 7,000 ರೂ ಕೋಟಿಯ ಹಲವು ಕಾಮಗಾರಿಳಿಗೆ ಪ್ರಧಾನಿ ಮೋದಿ ಶಂಕು ಸ್ಥಾಪನೆ

ನಾಗ್ಪುರದಲ್ಲಿ ಅಂದಾಜು 7,000 ರೂ ಕೋಟಿಯ ಹಲವು ಕಾಮಗಾರಿಳಿಗೆ ಪ್ರಧಾನಿ ಮೋದಿ ಶಂಕು ಸ್ಥಾಪನೆ

ಮುಂಬೈ: ಮಹಾರಾಷ್ಟ್ರದಲ್ಲಿ 7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಲಿದ್ದಾರೆ. ನಾಗ್ಪುರದಲ್ಲಿ ಅಂದಾಜು 7,000 ಕೋಟಿ ರೂ. ವೆಚ್ಚದ ಡಾ ಬಾಬಾ ಸಾಹೇಬ್​​ ಅಂಬೇಡ್ಕರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಇದು ಉತ್ಪಾದನೆ, ವಾಯುಯಾನ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚಾಗಿ ಇದು ನಾಗ್ಪುರ ನಗರ ಮತ್ತು ವಿದರ್ಭ ಪ್ರದೇಶಕ್ಕೆ ಪ್ರಯೋಜನಕಾರಿಯಾಗಿದೆ.

ಇದರ ಜೊತೆಗೆ ಎಲ್ಲರಿಗೂ ಆರೋಗ್ಯ ಸೇವೆ ಖಚಿತಪಡಿಸಿಕೊಳ್ಳಲು ಮುಂಬೈ, ನಾಸಿಕ್, ಜಲ್ನಾ, ಅಮರಾವತಿ, ಗಡ್ಚಿರೋಲಿ, ಬುಲ್ಧಾನಾ, ವಾಶಿಮ್, ಭಂಡಾರಾ, ಹಿಂಗೋಲಿ ಮತ್ತು ಅಂಬರನಾಥ್ (ಥಾಣೆ) ನಲ್ಲಿರುವ ಒಟ್ಟಯ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ.

ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ವಿಶೇಷ ಆರೋಗ್ಯ ಸೇವೆಯನ್ನು ನೀಡಲಾಗುವುದು. ಭಾರತವನ್ನು ವಿಶ್ವ ಕೌಶಲ್ಯ ರಾಜಧಾನಿಯಾಗಿಸುವ ಗುರಿಯೊಂದಿಗೆ ಪ್ರಧಾನಿ ಮುಂಬೈನಲ್ಲಿ ಇಂಡಿಯನ್​ ಇನ್ಸಿಟ್ಯೂಟ್​​ ಆಫ್​ ಸ್ಕಿಲ್ಸ್​ (ಐಐಎಸ್​) ಅನ್ನು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ - ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪ್ರಾಯೋಗಿಕ ತರಬೇತಿಯೊಂದಿಗೆ ಉದ್ಯಮ ಸಿದ್ಧ ಉದ್ಯೋಗ ಸೃಷ್ಟಿ ಗುರಿಯನ್ನು ಈ ಸಂಸ್ಥೆ ಹೊಂದಿದೆ.

Category
ಕರಾವಳಿ ತರಂಗಿಣಿ