image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕ ಹಾಗೂ ಕೇರಳ ಸಹೋದರರಂತೆ: ಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕ ಹಾಗೂ ಕೇರಳ ಸಹೋದರರಂತೆ: ಸಿಎಂ ಡಿ.ಕೆ. ಶಿವಕುಮಾರ್

ಅಲಪುಳ್ಳ: ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಸಹೋದರರಂತಿದ್ದು, ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

​ಕೇರಳದ ಅಲಪುಳ್ಳದಲ್ಲಿ ನಡೆದ 72ನೇ ಆವೃತ್ತಿಯ ನೆಹರೂ ಟ್ರೋಫಿ ಬೋಟ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಐತಿಹಾಸಿಕ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ತಮಗೆ ಅತ್ಯಂತ ಸಂತೋಷ ತಂದಿದೆ ಎಂದ ಅವರು, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ಕ್ರೀಡೆಗೆ ಆದ್ಯತೆ ನೀಡಿ ದೊಡ್ಡ ಸಂದೇಶ ನೀಡಿದ್ದರು ಎಂದು ಸ್ಮರಿಸಿದರು.

​ಕಾಂಗ್ರೆಸ್ ಪಕ್ಷ ಯಾವಾಗಲೂ ಸಮಾಜದ ಎಲ್ಲ ವರ್ಗದ ಜನರನ್ನು ಅಧಿಕಾರದಲ್ಲಿ ಭಾಗಿಯಾಗುವಂತೆ ಮಾಡಿದೆ. ಕರ್ನಾಟಕದಲ್ಲಿ ಮೈಸೂರು ದಸರಾವನ್ನು ಎಷ್ಟು ಸಂಭ್ರಮದಿಂದ ಆಚರಿಸಲಾಗುತ್ತದೆಯೋ, ಅದೇ ರೀತಿಯಲ್ಲಿ ಕೇರಳದಲ್ಲಿ ಈ ಬೋಟ್ ಸ್ಪರ್ಧೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಬಣ್ಣಿಸಿದರು.

​ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದನ್ನು ಅವರು ನೆನಪಿಸಿಕೊಂಡರು. ಕರ್ನಾಟಕ ಹಾಗೂ ಕೇರಳ ರಾಜ್ಯಗಳು ನೀರು, ಹವಾಮಾನ ಮತ್ತು ಸಂಸ್ಕೃತಿಯನ್ನು ಪರಸ್ಪರ ಹಂಚಿಕೊಂಡಿವೆ. ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕರ್ನಾಟಕ ವೇದಿಕೆಯಾಗಿದ್ದರೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕೇರಳ ರಾಜ್ಯ ವೇದಿಕೆಯಾಗಿದೆ ಎಂದು ತಿಳಿಸಿದರು.

​ಯುಡಿಎಫ್ ಮೈತ್ರಿಕೂಟ ಒಟ್ಟಾಗಿ ಕೆಲಸ ಮಾಡಲಿದ್ದು, ಕೊಟ್ಟ ಮಾತಿನಂತೆ ರಾಜ್ಯದ ಕಲ್ಯಾಣಕ್ಕೆ ಶ್ರಮಿಸಲಿದೆ. ನಾವೆಲ್ಲರೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಷ್ಟ್ರಮಟ್ಟದಲ್ಲಿ ಒಗ್ಗಟ್ಟಿನ ಹೋರಾಟ ನಡೆಸುವ ದೊಡ್ಡ ಸಂದೇಶವನ್ನು ಈ ಮೂಲಕ ರವಾನಿಸುತ್ತಿದ್ದೇವೆ ಎಂದರು. ಸ್ಪರ್ಧಿಗಳು ಹಾಗೂ ಆಡಳಿತ ಮಂಡಳಿಗೆ ಶುಭ ಹಾರೈಸಿದ ಅವರು, ಕರ್ನಾಟಕವು ಕೇರಳದ ಜತೆಗೆ ಸದಾ ನಿಲ್ಲಲಿದೆ ಎಂದು ಭರವಸೆ ನೀಡಿದರು.

Category
ಕರಾವಳಿ ತರಂಗಿಣಿ