image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ. ಶಿವಕುಮಾರ್

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರೈತರ ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರಗಾಲದ ಪರಿಸ್ಥಿತಿಯನ್ನು ಸ್ವತಃ ಪ್ರಧಾನಮಂತ್ರಿಗಳೇ ತಿಳಿಸಿರುವುದರಿಂದ, ಕೇಂದ್ರ ಸರ್ಕಾರವು ಸಾಲಮನ್ನಾ ಮಾಡಿಸುವ ಜವಾಬ್ದಾರಿಯನ್ನು ಹೊರಬೇಕು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು ಎಂದು ಅವರು ಕೋರಿದರು. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಆದರೆ ವಿಪಕ್ಷಗಳಿಗೆ ರೈತರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಆಸಕ್ತಿ ಇಲ್ಲದೆ ಕೇವಲ ರಾಜಕಾರಣ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬರ ಮತ್ತು ಕಸ್ತೂರಿರಂಗನ್ ವರದಿ ಹಾಗೂ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಪ್ರತ್ಯೇಕವಾಗಿ ವಿಶೇಷ ಅಧಿವೇಶನವನ್ನು ನಡೆಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ