image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಧಿವೇಶನದಲ್ಲಿ ಎಲ್ಲ ಶಾಸಕರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕು ಎಂದರು.

ಎಪಿಎಂಸಿ ಭೇಟಿಯ ಕುರಿತು ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗಬಾರದು ಎಂಬುದು ಸರ್ಕಾರದ ನಿಲುವು ಎಂದರು. ಬಾಲಕಾರ್ಮಿಕರ ರಕ್ಷಣೆ ಕೇವಲ ಕಾರ್ಮಿಕ ಇಲಾಖೆಯಷ್ಟೇ ಅಲ್ಲದೆ, ಪೊಲೀಸ್ ಇಲಾಖೆಯ ಜವಾಬ್ದಾರಿಯೂ ಹೌದು ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ರಾಜಕೀಯ ಟಾರ್ಗೆಟ್ ಕುರಿತು ಮಾತನಾಡುತ್ತಾ, ಅವರು ಯಾವುದೇ ತಪ್ಪು ಮಾಡಿಲ್ಲ ಮತ್ತು ಕಾನೂನು ಚೌಕಟ್ಟಿನಲ್ಲೇ ವ್ಯವಹಾರ ನಡೆಸುತ್ತಿದ್ದಾರೆ ಎಂದರು. ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪಗಳಿದ್ದರೂ ತನಿಖಾ ಸಂಸ್ಥೆಗಳು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸುತ್ತಿವೆ ಎಂದು ಅವರು ಆರೋಪಿಸಿದರು. ವಂದೇ ಮಾತರಂ, ರಾಷ್ಟ್ರಧ್ವಜ ಹಾಗೂ ಸಂವಿಧಾನಕ್ಕೆ ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ಅತ್ಯುನ್ನತ ಗೌರವ ನೀಡುತ್ತ ಬಂದಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಅಕ್ರಮ ಬಂದೂಕುಗಳನ್ನು ಸರ್ಕಾರದ ವಶಕ್ಕೆ ನೀಡಲು ಮುಜೀಮ್‌ ನೀಡಲಾಗಿದ್ದು, ರಾಮಕೃಷ್ಣ ಹೆಗಡೆ ಅವರ ಕಾಲದಲ್ಲೂ ಇಂತಹ ಅಭಿಯಾನ ಯಶಸ್ವಿಯಾಗಿತ್ತು ಎಂದು ಸ್ಮರಿಸಿದರು.

Category
ಕರಾವಳಿ ತರಂಗಿಣಿ