ಮೈಸೂರು:ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿದ್ದರಾಮಯ್ಯ ಕಾಂಗ್ರೆಸಿಗೆ ಬರುವ ಮನಸ್ಸಿರುವವರಿಗೆ ಪರೋಕ್ಷವಾಗಿ ಅಹ್ವಾನ ಕೊಟ್ಟಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಹಿನ್ನಲೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಮತ್ತು ಸಿ ಪಿ ಯೋಗೇಶ್ವರ್ ನಡುವೆ ನಡೆಯುತ್ತಿರುವ ಗುದ್ದಾಟದ ನಡುವೆ ತನಗೆ ಸ್ಥಾನ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈಗಾಗಲೇ ಯೋಗೇಶ್ವರ್ ಹೇಳಿದ್ದಾರೆ. ಅದರೆ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದಿದ್ಸಾರೆ.
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.