image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ: ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ - ಸಿಎಂ ಡಿ.ಕೆ. ಶಿವಕುಮಾರ್

ವಿಧಾನ ಪರಿಷತ್ ಚುನಾವಣೆ: ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ - ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿದ್ದು, ಒಂದು ವರ್ಷ ಮುಂಚಿತವಾಗಿಯೇ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಪ್ರಸ್ತುತ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಎಲ್ಲಾ ಸಚಿವರು ಹಾಗೂ ಶಾಸಕರು ಜವಾಬ್ದಾರಿ ವಹಿಸಿಕೊಂಡು ಈ ಚುನಾವಣೆಯನ್ನು ಎದುರಿಸಲಿದ್ದಾರೆ ಎಂದು ಕೆಪಿಸಿಸಿ ಕಚೇರಿ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದರು.

ಇದೇ ವೇಳೆ ದೆಹಲಿ ಪ್ರಯಾಣದ ಕುರಿತು ಮಾತನಾಡಿ, ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಸಮಯ ಸಿಕ್ಕ ಬಳಿಕ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ