image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆ ಜಯ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆ ಜಯ

ಮಂಗಳೂರು: ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಕಿಶೋರ್  ಅವರು 3,654 ಮತ ಪಡೆದಿದು ಮೊದಲ ಸ್ಥಾನದಲ್ಲಿದ್ದರೆ, 1957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಸ್ ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ 5906 ಮತಗಳು ಚಲಾವಣೆಯಾಗಿದ್ದು, 5819 ಸಿಂಧು ಮತಗಳಿದ್ದವು‌. ಒಟ್ಟು 87 ಮತಗಳು ತಿರಸ್ಕೃತವಾಗಿದೆ.

ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ನಗರದ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆಯಿತು.

ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಮತ ಎಣಿಕೆ ಕೇಂದ್ರದಲ್ಲಿ ಉಪಸ್ಥಿತರಿದ್ದರು.

ದ.ಕ,ಉಡುಪಿ ಜಿಲ್ಲೆಯ ಮತದಾನ ಕೇಂದ್ರ ಗಳಲ್ಲಿ 2024 ರ ಅ.21ರಂದು ಮತದಾನ ನಡೆದಿತ್ತು.

2021 ರ ಡಿಸೆಂಬರ್ 10 ರಂದು ಈ ಕ್ಷೇತ್ರಕ್ಕೆ ನಡೆದ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, 3672, ಮಂಜುನಾಥ ಭಂಡಾರಿ 2079, ಎಸ್ಪಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು. ಕೋಟ ಶ್ರೀನಿವಾಸ ಪೂಜಾರಿ 1593 ಮತಗಳ ಅಂತರದಿಂದ ಜಯಗಳಿಸಿದ್ದರು. 6,012  ಮತ ಚಲಾವಣೆಯಾಗಿದ್ದು, 5,955 ಮತಗಳು ಸಿಂಧುವಾಗಿದ್ದವು.

Category
ಕರಾವಳಿ ತರಂಗಿಣಿ