image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಚಾಮುಂಡಿ ಬೆಟ್ಟದಲ್ಲಿ ವೈಭವದ ಮೈಸೂರು ದಸರಾ 2026ಕ್ಕೆ ಚಾಲನೆ: ಗವಿಸಿದ್ದೇಶ್ವರ ಶ್ರೀಗಳಿಂದ ಶುಭಾರಂಭ

ಚಾಮುಂಡಿ ಬೆಟ್ಟದಲ್ಲಿ ವೈಭವದ ಮೈಸೂರು ದಸರಾ 2026ಕ್ಕೆ ಚಾಲನೆ: ಗವಿಸಿದ್ದೇಶ್ವರ ಶ್ರೀಗಳಿಂದ ಶುಭಾರಂಭ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ಕ್ಕೆ ಭಾನುವಾರ ಚಾಮುಂಡಿ ಬೆಟ್ಟದ ಶುಭ ವೃಶ್ಚಿಕ ಲಗ್ನದಲ್ಲಿ ಅತ್ಯಂತ ವೈಭವಪೂರ್ಣವಾಗಿ ಚಾಲನೆ ದೊರೆಯಿತು. ಕೊಪ್ಪಳದ ಶ್ರೀ ಗವಿಮಠದ ಪೀಠಾಧಿಪತಿಗಳಾದ ಅಭಿನವ ಗವಿದ್ದೇಶ್ವರ ಮಹಾಸ್ವಾಮೀಜಿಗಳು ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹತ್ತು ದಿನಗಳ ಈ ಸಂಭ್ರಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಅಧಿಕೃತವಾಗಿ ಉದ್ಘಾಟನೆ ನೆರವೇರಿಸಿದರು.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಹಾಗೂ ಅಗ್ರಪೂಜೆ ನೆರವೇರಿಸಲಾಯಿತು. ತದನಂತರ ವೇದಿಕೆ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ನಾಡಹಬ್ಬದ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಾಡಿನ ಶ್ರೇಯಸ್ಸು, ಕೃಷಿ ಸಮೃದ್ಧಿ ಹಾಗೂ ಸಮಸ್ತ ಜನತೆಯ ಕ್ಷೇಮಾಭಿವೃದ್ಧಿಗಾಗಿ ಪೂಜ್ಯ ಶ್ರೀಗಳು ಶುಭ ಹಾರೈಸಿದರು.

ಈ ಮಹೋನ್ನತ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಹಲವು ಪ್ರಮುಖ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಿದ್ದರು.

ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ ತಂಗಡಗಿ, ಕೆ.ವೈ. ಯತೀಂದ್ರ ಸಿದ್ದರಾಮಯ್ಯ, ಸಿ.ಎಸ್. ಪುಟ್ಟರಂಗಶೆಟ್ಟಿ, ಕೆ.ಎಸ್. ಬಸವಂತಪ್ಪ, ರಿಜ್ವಾನ್ ಅರ್ಷದ್ ಹಾಗೂ ಡಾ. ಅಜಯ್ ಸಿಂಗ್ ಉಪಸ್ಥಿತರಿದ್ದರು.

ಇವರೊಂದಿಗೆ ಸಂಸದ ಸುನೀಲ್ ಬೋಸ್, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ದರ್ಶನ್ ಧ್ರುವನಾರಾಯಣ್, ಎ.ಆರ್. ಕೃಷ್ಣಮೂರ್ತಿ ಮತ್ತು ಡಿ. ರವಿಶಂಕರ್ ಭಾಗವಹಿಸಿದ್ದರು.

ಅಲ್ಲದೆ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಶಿವಕುಮಾರ್, ಡಿ. ತಿಮ್ಮಯ್ಯ, ವಿವೇಕಾನಂದ ಹಾಗೂ ರಘು ಕೌಟಿಲ್ಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಸೇರಿದಂತೆ ವಿವಿಧ ರಾಜಕೀಯ ಧುರೀಣರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ದಸರಾ ಉದ್ಘಾಟನೆಯೊಂದಿಗೆ ಮೈಸೂರಿನಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮಗಳು, ಅರಮನೆಯ ದೀಪಾಲಂಕಾರ ಹಾಗೂ ನಾನಾ ವೈವಿಧ್ಯಮಯ ಉತ್ಸವಗಳ ಸಂಭ್ರಮ ಕಳೆಗಟ್ಟಿದೆ.

Category
ಕರಾವಳಿ ತರಂಗಿಣಿ