image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಯಾವುದೇ ರಾಜಕೀಯಕ್ಕೆ ಅವಕಾಶ ನೀಡದೆ, ಎಲ್ಲರೂ ಒಟ್ಟಾಗಿ ಸೇರಿ ಶಾಂತಿ ಹಾಗೂ ಸೌಹಾರ್ದತೆಯಿಂದ ಬಗೆಹರಿಸಬೇಕಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಜವಾಬ್ದಾರಿ ಕೇವಲ ಒಬ್ಬರ ಮೇ ಮಾತ್ರ ಇಲ್ಲ, ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರು ಕಬ್ಬು ಬೆಳೆದರೆ ಮಾತ್ರ ಸಕ್ಕರೆ ಕಾರ್ಖಾನೆಗಳು ಉಳಿದುಕೊಳ್ಳಲು ಸಾಧ್ಯ. ಹಾಗೆಯೇ ಕಾರ್ಖಾನೆಗಳು ಕೂಡ ನಷ್ಟವಿಲ್ಲದೆ ಕಬ್ಬನ್ನು ಅರೆದು ರೈತರಿಗೆ ನ್ಯಾಯ ಒದಗಿಸಬೇಕಿದೆ. ರೈತರು ಮತ್ತು ಕಾರ್ಖಾನೆಗಳು ಎರಡೂ ಉಳಿದರೆ ಮಾತ್ರ ಎಲ್ಲರ ಬದುಕಿಗೆ ಭದ್ರತೆ ಇರುತ್ತದೆ ಎಂದರು. ಈ ನಿಟ್ಟಿನಲ್ಲಿ ರೈತರು, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಸರ್ಕಾರದ ವತಿಯಿಂದ ಇರುವ ಸಮಸ್ಯೆಗಳೇನು ಎಂಬುದನ್ನು ಕೂಲಂಕಷವಾಗಿ ಚರ್ಚಿಸಲು ಎಲ್ಲರ ಅನುಕೂಲಕ್ಕೆ ತಕ್ಕಂತೆ ಸಭೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ರೈತರಿಗೆ ನೀಡಿದ ಮಾತಿನಂತೆ, ಈ ಸಭೆಗೆ ಕೇಂದ್ರ ಸಚಿವರು, ಸಂಸದರು ಹಾಗೂ ಆ ಭಾಗದ ಸಚಿವರನ್ನು ಆಹ್ವಾನಿಸಲಾಗುವುದು. ಈಗಾಗಲೇ ಬರ ಪರಿಹಾರ ಹಾಗೂ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಪ್ರಧಾನಮಂತ್ರಿಗಳ ಬಳಿ ಸಮಯ ಕೋರಲಾಗಿದೆ. ಕೇಂದ್ರ ಸಚಿವರು ಕೂಡ ತಮ್ಮ ಕೈಲಾದಷ್ಟು ಉತ್ತಮ ಕೆಲಸ ಮಾಡುತ್ತಿದ್ದು, ಎಲ್ಲರ ಸಹಕಾರದೊಂದಿಗೆ ಈ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸೂಚನೆ

ಸಚಿವರೊಂದಿಗೆ ನಡೆಸಿದ ಸಭೆಯ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿಸೆಂಬರ್ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಿದೆ. ಚುನಾವಣಾ ಆಯೋಗವು ಅಕ್ಟೋಬರ್ 27ರಂದು ಹೊಸ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೆ, ಪಂಚಾಯತ್ ಮಟ್ಟದಲ್ಲಿ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅನುದಾನ ಒದಗಿಸುವ ಕುರಿತು ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದ್ದು, ಶಾಸಕರಿಗೆ ವರದಿ ಸಲ್ಲಿಸಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಾಡಿನ ಜನತೆಗೆ ಹಬ್ಬದ ಶುಭಾಶಯ

ರಾಜ್ಯದ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ರೈತರು, ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರು ತಮ್ಮ ಕೆಲಸದ ಪರಿಕರಗಳಿಗೆ ಮತ್ತು ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿಯ ಕೃಪೆಯಿಂದ ನಾಡಿನ ಜನತೆಗೆ ಒಳಿತಾಗಲಿ ಹಾಗೂ ಎಲ್ಲರ ಪ್ರಯಾಣ ಸುಖಕರ ಮತ್ತು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

Category
ಕರಾವಳಿ ತರಂಗಿಣಿ