image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಪ್ರಶಸ್ತಿ ಪ್ರಧಾನ

ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಪ್ರಶಸ್ತಿ ಪ್ರಧಾನ

 

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಆಯೋಜನೆಗೊಂಡಿದ್ದ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರಧಾನ ಮಾಡಿ ರಾಜ್ಯೋತ್ಸವ ಸಂದೇಶದಲ್ಲಿ ಅತ್ಯಧಿಕ ಜಿಎಸ್ ಟಿ ಸಂಗ್ರಹಿಸುವ ರಾಜ್ಯ ಕರ್ನಾಟಕವಾಗಿದ್ದರೂ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ.

ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ರಾಜ್ಯಕ್ಕೆ ಅನುಕೂಲಕ್ಕೆ ತಕ್ಕಂತೆ ವಿಧಿಸುವ ಅಧಿಕಾರ ಜಿಎಸ್ಪಿಯಿಂದ ಇಲ್ಲವಾಗಿದೆ. ಇದಕ್ಕೆ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ.

ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಿದೆ. ನಮ್ಮ ಶ್ರಮದ ಪಾಲನ್ನು ಯಾರೋ ಅನ್ಯಾಯವಾಗಿ ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ರಾಜ್ಯಗಳಿಗೆ ಬರಬಾರದು. ಕರ್ನಾಟಕ ಸರಕಾರ  ರಾಜ್ಯದ ಹಿತಾಸಕ್ತಿ ಪರವಾಗಿ ಗಟ್ಟಿಯಾಗಿ ನಿಂತಿದೆ ಎಂದು ತಿಳಿಸಿದರು.

ಸ್ವಾತಂತ್ರ‍್ಯ ನಂತರ ಕರ್ನಾಟಕ ಜನಸಂಖ್ಯಾ ನಿಯಂತ್ರಣಕ್ಕೆ ಅವಿರತವಾಗಿ ಶ್ರಮಿಸಿ ಯಶಸ್ಸು ಕಂಡಿದೆ. ಆದರೆ ಶಿಕ್ಷಣದಲ್ಲಿ ಹಿಂದುಳಿದಿರುವ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಸಮರ್ಪಕವಾಗಿ ಅಳವಡಿಸದೆ ಇರುವ ಹಿಂದಿ ಮಾತನಾಡುವ ಉತ್ತಮ ರಾಜ್ಯಗಳಿಗೆ ಹೆಚ್ಚು ಲೋಕಸಭಾ ಸದಸ್ಯರನ್ನು ನೀಡಿ ಕಡಿಮೆ ಜನಸಂಖ್ಯೆ ಇರುವ ದಕ್ಷಿಣ ರಾಜ್ಯಗಳಿಗೆ ಲೋಕಸಭಾ ಸದಸ್ಯರನ್ನು ಕಡಿಮೆ ಮಾಡಿ ಕೇಂದ್ರ ಮಟ್ಟದಲ್ಲಿ ದಕ್ಷಿಣ ಭಾರತ ಹಾಗೂ ಕರ್ನಾಟಕದ ಜನರ ಪ್ರಾತಿನಿಧ್ಯವನ್ನೇ ಇಲ್ಲವಾಗಿಸುವ ಕ್ರಮವನ್ನು ನಾವು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಹೇಳಿದರು.

ನಮ್ಮ ಕನ್ನಡ ಸಮೃದ್ಧವಾಗಿದೆ ಎಂದು ನಾವು ಸುಮ್ಮನಿರಲಾಗದು. ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯರ್ ಮನೋಜ್ ಕೋಡಿಕ್ಕಲ್, ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪ್ರವೀಣ್ ಕುಮಾರ್ ಆಳ್ವ ಎ.ಸಿ. ವಿನಯರಾಜ್, ನವೀನ್ ಡಿಸೋಜ, ಶಾಹುಲ್ ಹಮೀದ್, ಕಸಾದ ದ.ಕ. ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಸದಾಶಿವ ಉಳ್ಳಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,  ದೇವಿಪ್ರಸಾದ್ ಶೆಟ್ಟಿ, ಡಾ. ಶಿವಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

 

Category
ಕರಾವಳಿ ತರಂಗಿಣಿ