image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆ

ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆ

ಬೆಂಗಳೂರು: ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳಲಿದ್ದು, ತಮಿಳುನಾಡು, ಶ್ರೀಲಂಕಾ ಕರಾವಳಿ ಕಡೆಗೆ ಚಲಿಸಲಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿಸಿದೆ

Category
ಕರಾವಳಿ ತರಂಗಿಣಿ