image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗಂಡು ಮಕ್ಕಳಿಗೆ ಉಚಿತ ಬಸ್‌ ಪ್ರಯಾಣ ಪ್ರಸ್ತಾವನೆ ಇಲ್ಲ ಎನ್ನುವ ಮೂಲಕ ಗಂಡು ಮಕ್ಕಳ ಆಸೆಗೆ ತಣ್ಣೀರೆರಚಿದ ರಾಮಲಿಂಗಾರೆಡ್ಡಿ

ಗಂಡು ಮಕ್ಕಳಿಗೆ ಉಚಿತ ಬಸ್‌ ಪ್ರಯಾಣ ಪ್ರಸ್ತಾವನೆ ಇಲ್ಲ ಎನ್ನುವ ಮೂಲಕ ಗಂಡು ಮಕ್ಕಳ ಆಸೆಗೆ ತಣ್ಣೀರೆರಚಿದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ಹೆಣ್ಣುಮಕ್ಕಳ ರೀತಿ ಶಕ್ತಿ ಯೋಜನೆಯಡಿ ಗಂಡುಮಕ್ಕಳಿಗೆ ಉಚಿತ ಪ್ರಯಾಣದ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಈ ಸಂಬಂಧ  ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ ಎಂದರು. ಬೆಗಳೂರಿನಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದ ಸಂವಾದ ವೊಂದರಲ್ಲಿ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಂಡು ಮಕ್ಕಳಿಗೂ ಉಚಿತ ಪ್ರಯಾಣದ ಅವಕಾಶ ನೀಡುವ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು. ಡಿ.ಕೆ. ಶಿವಕುಮಾ‌ರ್ ಅವರನ್ನು ಭೇಟಿಯಾದಾಗ ಈ ಕುರಿತು ವಿಚಾರಿಸುತ್ತೇನೆ. ಸದ್ಯ ನಮ್ಮ ಬಳಿ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ