ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಸಿಎಂ ಎಚ್ಚರಿಕೆ ನೀಡಿದ್ದಾರೆ.
ಸಬೆಯಲ್ಲಿ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.