ಮಹಾರಾಷ್ಟ್ರ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು.
ಪಾಟೀಲ್ ಅವರು ಶಾಸಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡಲಿದ್ದು, ಅಧಿವೇಶನಗಳಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಲು ಅವರ ಮನವಿಗಳನ್ನು ಪರಿಶೀಲಿಸುತ್ತಾರೆ. ಎನ್‌ಸಿಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 288 ಸ್ಥಾನಗಳಲ್ಲಿ 233 ಸ್ಥಾನಗಳನ್ನು ಗಳಿಸುವ ಮೂಲಕ ಅದ್ಭುತ ಪ್ರದರ್ಶನವನ್ನು ನೀಡಿವೆ. ಎನ್ ಸಿ ಪಿ ಅಜಿತ್ ಪವಾರ್ ಬಣ ಸ್ಪರ್ಧಿಸಿದ 59 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಪಡೆದಿದೆ.