image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂ ಕಂಪನ : 3 ಸೆಕೆಂಡ್ ವರೆಗೆ ಭೂಮಿ ನಡುಕ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂ ಕಂಪನ : 3 ಸೆಕೆಂಡ್ ವರೆಗೆ ಭೂಮಿ ನಡುಕ

ಶಿರಸಿ:  ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ   ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಅದರ ನಡುವೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇದೀಗ ಭೂಕಂಪನದ ಅನುಭವವಾಗಿರುವ ಬಗ್ಗೆ ವರದಿಯಾಗಿದೆ. 

 ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿ ಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ ಕಸಗೆ, ಬಂಡಳದಲ್ಲಿ ಭೂಮಿ ಕಂಪಿಸಿದೆ. 2 ತಾಲೂಕುಗಳ ಹಲವು ಪ್ರದೇಶಗಳಲ್ಲಿ 3 ಸೆಕೆಂಡ್ ಗಳ ವರೆಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಸ್ಥಳಿಯರು ಹೇಳಿದರು.

Category
ಕರಾವಳಿ ತರಂಗಿಣಿ