ಮಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ
ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಟಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಕ್ಷಣದಿಂದಲೇ ಸಿದ್ದರಾಗಬೇಕು. ಆಯಾ ತಹಶೀಲ್ದಾರರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು.ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ:-
ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 6ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ಧವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ಕಾಲೇಜಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ ,ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ,ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.