image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾರು-ಬಸ್‌ ನಡುವೆ ಡಿಕ್ಕಿ: ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ಕಾರು-ಬಸ್‌ ನಡುವೆ ಡಿಕ್ಕಿ: ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ಕೇರಳ: ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದ್ದು, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ಕಲರಕೋಡ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಉಳಿದವರ ಸ್ಥಿತಿ ಗಂಬೀರವಾಗಿದೆ ಎಂದು ತಿಳಿದು ಬಂದಿದೆ.ಚಡಿಕ್ಕಿಯ ಪರಿಣಾಮದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಕಾರನ್ನು ಸ್ವಲ್ಪ ಕತ್ತರಿಸಿ ಒಳಗಿದ್ದವರನ್ನು ಹೊರಗೆ ತೆಗೆಯಲಾಯಿತು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ನಂತರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ