image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದ.ಕ. ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದ.ಕ. ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಬಾಂಗ್ಲಾ ಸೇರಿದಂತೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಿಂದುಗಳನ್ನು ಗುರಿಯಾಗಿಸಿ ದೌರ್ಜನ್ಯ ನಿರಂತರ ವಾಗಿ ನಡೆಯುತ್ತಿದೆ. ಜಗತ್ತಿನಲ್ಲೇ ಹಿಂದುತ್ವ ನಾಶ ಮಾಡಬೇಕು ಎನ್ನುವುದು ಬಾಂಗ್ಲಾ ಸಂಚಿನ ಭಾಗವಾಗಿದೆ ಎಂದು ವಿಶ್ವಹಿಂದೂ ಪರಿಷತ್‌ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದ್ದಾರೆ. ಹಿಂದೂ ಹಿತರಕ್ಷಣಾ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಇಂದು ನಡೆದ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ, ಪಾಕಿಸ್ಥಾನ, ಅಫ್ಘಾನಿಸ್ಥಾನ, ಬರ್ಮಾ, ಮ್ಯಾನ್ಮಾ‌ರ್, ಮಾಲ್ಮೀಲ್ಸ್ ಹಿಂದು ವಿರೋಧಿ ಹಾದಿ ತುಳಿದಿದೆ. ಚೀನಾ ಹಾಗೂ ಶ್ರೀಲಂಕ ಎಡಪಕ್ಷಗಳ ಹಿಡಿತದಲ್ಲಿವೆ. ಹಿಂದು ಅಲ್ಪಸಂಖ್ಯಾತರಾಗಿ ಇರುವ ದೇಶಗಳಲ್ಲಿ ದೌರ್ಜನ್ಯ ಹೆಚ್ಚಾಗಿ ನಡೆಯುತ್ತಿವೆ ಎಂದರು.

 

ಪ್ರತಿಭಟನೆಯಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ವಜ್ರದೇಹಿ ಮಠ ಗುರುಪುರ, ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ, ಶ್ರೀ ವಿಧೇಂದ್ರ ತೀರ್ಥರು ಚಿತ್ರಾಪುರ, ಶ್ರೀ ಸನಂದ ಸ್ವಾಮೀಜಿ ಇಸ್ಕಾನ್ ಕಲಾಕುಂಜ, ಶ್ರೀ ಪ್ರೇಮ್ ಭಕ್ತಿ ಪ್ರಭು ಇಸ್ಕಾನ್ ಕುಡುಪು, ಶ್ರೀ ಸಚ್ಚಿದಾನಂದ ಅದೈತ ಸ್ವಾಮೀಜಿ ಕುಳಾಯಿ, ಶ್ರೀ ನಾಮನಿಷ್ಠ ಸ್ವಾಮೀಜಿ ಇಸ್ಕಾನ್, ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಕಾರ್ಕಳ, ಹಿಂದು ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಚ್‌. ಕೆ. ಪುರುಷೋತ್ತಮ, ಹಿಂದೂ ಜಾಗರಣ ವೇದಿಕೆ ಪ್ರಾಂತ ನಿಧಿ ಪ್ರಮುಖ್ ರವಿರಾಜ್ ಕಡಬ ಮತ್ತಿತರರು ಉಪಸ್ಥಿತರಿದ್ದರು.

 ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.  ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ

ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಚಿತ್ರೀಕರಣಕ್ಕೆ ತೆರಳಿದ ಮಾಧ್ಯಮ ಮಂದಿಯನ್ನು ತಳ್ಳಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್‌ಗಳನ್ನು ಬದಿಗೊತ್ತಿದ ಪ್ರತಿಭಟನಾಕಾರರು ರಸ್ತೆ ತಡೆಗೆ ಮುಂದಾಗಿದ್ದರು. ಆಗ ಪೊಲೀಸರು ಮಧ್ಯಪ್ರವೇಶಿಸಿ ರಸ್ತೆ ತಡೆಗೆ ಯತ್ನಿಸಿದವರನ್ನು ತಡೆದರು  ಇದು ಪೊಲೀಸ್ ಮತ್ತು ಕಾರ್ಯಕರ್ತರ ನಡುವೆ ಚಕಮಕಿಗೆ ಕಾರಣವಾಯಿತು.

ಈ ವಿದ್ಯಮಾನದ ಚಿತ್ರೀಕರಣ ನಡೆಸುತ್ತಿದ್ದ ಇಬ್ಬರು ಖಾಸಗಿ ಚಾನಲ್‌ನ ಕ್ಯಾಮರಾಮನ್‌ಗಳನ್ನು ತಳ್ಳಿದ ಪ್ರತಿಭಟನಾಕಾರರು ಹಲ್ಲೆಗೆ ಯತ್ನಿಸಿದ ಘಟನೆಯೂ ನಡೆಯಿತು. ಹಲ್ಲೆಗೆ ಯತ್ನ ನಡೆದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ವರದಿಗಾರಿಕೆಯನ್ನು ಬಹಿಷ್ಕರಿಸಿರು.

Category
ಕರಾವಳಿ ತರಂಗಿಣಿ