image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕ‌ರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕ‌ರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ || ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದರು. 

Category
ಕರಾವಳಿ ತರಂಗಿಣಿ