ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆಶ್ರೀ ಸುಬ್ರಹ್ಮಣ್ಯ ದಲ್ಲಿ ಚಂಪಾಷಷ್ಠಿ ಮಹಾ ರಥೋತ್ಸವ ಶನಿವಾರ ಅದ್ದೂರಿಯಾಗಿ ನಡೆಯಿತು.
ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು. ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ ಚಂಪಾ ಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ.ರಮಾನಾಥ ರೈ, ರಾ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ,
ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಕಧಿಕಾರಿ ಯೇಸುರಾಜ್ ಸೇರಿದಂತೆ ನಾಡಿನ ವಿವಿಧ ಮೂಲೆಗಳಿಂದ ಆಗಮಿಸಿದ ಲಕ್ಷಕ್ಕೂ ಮೇಲಿನ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧನ್ಯರಾದರು.