ಬೆಳಗಾವಿ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನು ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಅವರುಆದಿತ್ಯ ಠಾಕರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದರು.