image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣಕ್ಕೆ ಜಮೀನು ತೊಡಕು...!

ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣಕ್ಕೆ ಜಮೀನು ತೊಡಕು...!

ಬೆಳ್ತಂಗಡಿ: ಪ್ರವಾಸೋದ್ಯಮವನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಿನಿ ವಿಮಾನ ನಿಲ್ದಾಣಕ್ಕೆ ಜಮೀನು ತೊಡಕು ಕಾಡುತ್ತಿದೆ. ಮಿನಿ ವಿಮಾನ ನಿಲ್ದಾಣಕ್ಕೆ ಕನಿಷ್ಠ 140 ಎಕ್ರೆ ಜಮೀನು ಅಗತ್ಯವಿದೆ. ಆದರೆ ಜಿಲ್ಲಾಡಳಿತವು ಗುರುತಿಸಿದ್ದ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಹಾಗೂ ಲಾಯಿಲ ಗ್ರಾಮಗಳ ಜಮೀನನ್ನು ಪರಿಶೀಲಿಸಿದ ಮೂಲಸೌಕರ್ಯ ಅಭಿವೃದ್ಧಿ ನಿಗಮದ ತಾಂತ್ರಿಕ ತಂಡ, ಈ ಜಾಗ ಸೂಕ್ತವಾಗಿಲ್ಲ ಎಂದು ತಿಳಿಸಿದೆ. ಜತೆಗೆ ಸದ್ಯ ಲಭ್ಯವಿರುವ ಜಮೀನು ಮಿನಿ ವಿಮಾನ ನಿಲ್ದಾಣ ನಿರ್ಮಿಸಲು ಸಾಲುತ್ತಿಲ್ಲ ಎಂದಿದೆ. ನಿಗದಿತ ಜಮೀನಿನ ಸ್ಥಿತಿಗತಿಯನ್ನು ಕಂದಾಯ, ಮಾಲಿನ್ಯ, ಭೂವಿಜ್ಞಾನ, ಭೂಮಾಪನ ಇಲಾಖೆ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿದ್ದಾರೆ. ವಿಮಾನಯಾನ ಸಚಿವಾಲಯಕ್ಕೆ ಸಂಬಂಧಿಸಿದ ಅಧಿಕಾರಿಗಳೂ ಪರಿಶೀಲಿಸಿದ್ದಾರೆ. ಈ ಜಾಗವು ಏರು ತಗ್ಗುಗಳಿಂದ ಕೂಡಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದ್ದು ಜತೆಗೆ ಅರಣ್ಯ ಇಲಾಖೆಯ ವಶದಲ್ಲಿರುವ ಅಕೇಶಿಯಾ ಹಾಗೂ ನೆಡುತೋಪುಗಳು ಇಲ್ಲಿರುವುದನ್ನು ಪರಿಶೀಲಿಸಲಾಗಿತ್ತು.

ಈಗ ಪರ್ಯಾಯ ಸ್ಥಳಗಳನ್ನು ಗುರುತಿಸಲು ಜಿಲ್ಲಾಡಳಿತಕ್ಕೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಂದ ಜಿಲ್ಲಾಡಳಿತಕ್ಕೆ ಇತ್ತೀಚೆಗೆ ಸೂಚನೆ ಬಂದಿದ್ದು, ಜಾಗಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Category
ಕರಾವಳಿ ತರಂಗಿಣಿ