ದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ ವಿಮಾನ ಮಾರ್ಗದ ಸೌಲಭ್ಯವನ್ನು ಒದಗಿಸುವುದರ ಕುರಿತು ಸಚಿವರಲ್ಲಿ ಸಮಗ್ರವಾಗಿ ಚರ್ಚೆ ನಡೆಸಿದರು.