image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹೆಲಿಕಾಪ್ಟರ್ ಮೂಲಕ ಕರಾವಳಿ ದರ್ಶನ: ಪದ್ಮಶ್ರೀ ಪುರಸ್ಕೃತರಾದ ಹರೆಕಳ ಹಾಜಬ್ಬ ಮತ್ತು ಅಮೈ ಮಾಹಾಲಿಂಗ ನಾಯ್ಕರಿಂದ ಚಾಲನೆ

ಹೆಲಿಕಾಪ್ಟರ್ ಮೂಲಕ ಕರಾವಳಿ ದರ್ಶನ: ಪದ್ಮಶ್ರೀ ಪುರಸ್ಕೃತರಾದ ಹರೆಕಳ ಹಾಜಬ್ಬ ಮತ್ತು ಅಮೈ ಮಾಹಾಲಿಂಗ ನಾಯ್ಕರಿಂದ ಚಾಲನೆ

ಮಂಗಳೂರು: ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಒಬ್ಬರಿಗೆ ತಲಾ ರೂಪಾಯಿ 4500.00 ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್  ಮೂಲಕ ಸುತ್ತು ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಸರಳ ಕಾರ್ಯಕ್ರಮದಲ್ಲಿ ಇಂದು ಮೇರಿ ಹಿಲ್ ನ ಹೆಲಿ ಪ್ಯಾಡ್ ನಲ್ಲಿ ಪದ್ಮಶ್ರೀ ಪುರಸ್ಕೃತ ಹರೆಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯ್ಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಜಿಲ್ಲಾ ಪಂಚಾಯತ್‌ ಸಿ ಇ ಒ ಆನಂದ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ದಕ್ಷಿಣ ಕನ್ನಡ ಪೊಲೀಸ್ ಅದೀಕ್ಷಕರಾದ ಯತೀಶ್ ಜೊತೆಯಿದ್ದರು. 

ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿ.21ರಿಂದ 31ರವರೆಗೆ  ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ  ಪ್ರಯಾಣಿಸಬಹುದಾಗಿದೆ. ಈ ಕಾಪ್ಟರ್  ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಹಾಕಲಿದೆ.

ಮಂಗಳೂರನ್ನು ಪಕ್ಷಿ ನೋಟದಲ್ಲಿ ನೋಡುವ ಅವಕಾಶ ಈ ಬಾರಿಯ ಕರಾವಳಿ ಉತ್ಸವದ ವಿಶೇಷ ಆಕರ್ಷಣೆ ಯಾಗಿ ಮತ್ತು ಹೆಲಿಟೂರಿಸಂ ನ್ನು ಮಂಗಳೂರು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

Category
ಕರಾವಳಿ ತರಂಗಿಣಿ