image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

377 ಕೋಟಿ ರೂ ವೆಚ್ಚದಲ್ಲಿ 371 ಬೆಡ್ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ಕಲಬುಗರಿಯಲ್ಲಿ ಲೋಕಾರ್ಪಣೆ

377 ಕೋಟಿ ರೂ ವೆಚ್ಚದಲ್ಲಿ 371 ಬೆಡ್ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ಕಲಬುಗರಿಯಲ್ಲಿ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ದಶಕಗಳ ಕನಸಾಗಿದ್ದ ಜಯದೇವ ಹೃದ್ರೋಗ ಆಸ್ಪತ್ರೆ ಕೊನೆಗೂ ಲೋಕಾರ್ಪಣೆಯಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ವೈದ್ಯ ಶಿಕ್ಷಣ ಇಲಾಖೆ ಸೇರಿ ಒಟ್ಟು 377 ಕೋಟಿ ರೂ. ವೆಚ್ಚದಲ್ಲಿ 371 ಬೆಡ್ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನ ಇಂದು ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆ ಮಾಡಿದ್ರು.

ಮಧ್ಯಾಹ್ನ 1 ಗಂಟೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯ ಆಪರೇಶನ್ ಥಿಯೇಟರ್, ಕ್ಯಾಥ್‌ಲ್ಯಾಬ್, ಒಪಿಡಿ, ವಾರ್ಡ್​ಗೆ ತೆರಳಿ ವೀಕ್ಷಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ದೀಪ ಬೆಳಗಿಸುವ ಮೂಲಕ ಹೈಟೆಕ್ ಜಯದೇವ ಹೃದ್ರೋಗ ಆಸ್ಪತ್ರೆಯನ್ನ ಜನಸೇವೆಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಯದೇವ ಆಸ್ಪತ್ರೆ ಇಡೀ ಏಷ್ಯಾ ಖಂಡದಲ್ಲೇ ದೊಡ್ಡ ಆಸ್ಪತ್ರೆಯಾಗಿದೆ. ಈ ಹೈಟೆಕ್ ಆಸ್ಪತ್ರೆಯನ್ನ ಸಾರ್ವಜನಿಕರು ಚೆನ್ನಾಗಿ ಕಾಪಾಡಿಕೊಂಡು ಹೋಗಬೇಕೆಂದು ಮನವಿ ಮಾಡಿದ್ರು. ಅಲ್ಲದೇ ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಾಜಿ ಘಟಕ, ಗುಲ್ಬರ್ಗಾ ವಿವಿಯ ಸಮಗ್ರ ಅಭಿವೃದ್ಧಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೇ ವೇಳೆ ಮೂರು ಬೇಡಿಕೆ ಇಟ್ಟರು. ಜೊತೆಗೆ ಮೈಸೂರು ಮಾದರಿಯಲ್ಲಿ ಕಲಬುರಗಿ ಭಾಗವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕೆಂದು ತಿಳಿಸಿದರು.

Category
ಕರಾವಳಿ ತರಂಗಿಣಿ