image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಅಂತ್ಯಕ್ರಿಯೆಯ ವೇಳೆ ಕೇರಳ ಸಿಎಂ ಪಂಚತಾರಾ ಹೋಟೆಲ್​ ಉದ್ಘಾಟನೆ : ಕಾಂಗ್ರೆಸ್​ ಟೀಕೆ

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಅಂತ್ಯಕ್ರಿಯೆಯ ವೇಳೆ ಕೇರಳ ಸಿಎಂ ಪಂಚತಾರಾ ಹೋಟೆಲ್​ ಉದ್ಘಾಟನೆ : ಕಾಂಗ್ರೆಸ್​ ಟೀಕೆ

ಕೇರಳ : ದೇಶದ ಆರ್ಥಿಕತೆಗೆ ಪುನರುಜ್ಜೀವನ ನೀಡಿದ, 10 ವರ್ಷ ಆಡಳಿತದ ಚುಕ್ಕಾಣಿ ಹಿಡಿದಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅವರ ನಿಧನಕ್ಕೆ ಇಡೀ ದೇಶವೇ ದುಃಖತಪ್ತವಾಗಿದೆ. ಇಂತಹ ಸಂತಾಪದ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಪಂಚತಾರಾ ಹೋಟೆಲ್​ ಉದ್ಘಾಟಿಸಿ ಟೀಕೆಗೆ ಗುರಿಯಾಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರವು ಶೋಕಿಸುತ್ತಿರುವಾಗ ಕೇರಳದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸಿದ್ದನ್ನು ಕಾಂಗ್ರೆಸ್ ಪಕ್ಷವು ಟೀಕಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರ ಈ ನಡೆಯು ಮಾಜಿ ಪ್ರಧಾನಿಗೆ ತೋರಿದ ಅಗೌರವ ಮತ್ತು ಅನುಚಿತ ವರ್ತನೆ ಎಂದು ಕಿಡಿಕಾರಿದ್ದಾರೆ.

ಹತ್ತು ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದಿಲ್ಲಿಯಲ್ಲಿ ನಡೆಯುತ್ತಿರುವಾಗ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಪಂಚತಾರಾ ಹೋಟೆಲ್​ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಹಾಜರಾಗುವುದು ಮತ್ತು ಉದ್ಘಾಟಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ