ಚೆನ್ನೈ: 'ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ 'ನ್ಯಾಯ ರ್ಯಾಲಿ' ನಡೆಯಲಿದೆ' ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ ಯತ್ನ ನಡೆಯುತ್ತಿದೆ' ಎಂದು ಅಣ್ಣಾಮಲೈ ಎಕ್ಸ್‌ನಲ್ಲಿ ಆರೋಪಿಸಿದ್ದು, 'ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜನವರಿ 3ರಂದು ಉಮಾರತಿ ರಾಜನ್ ಅವರ ನೇತೃತ್ವದಲ್ಲಿ ಮಧುರೈನಿಂದ ಚೆನ್ನೈವರೆಗೆ ನ್ಯಾಯ ರ್ಯಾಲಿ ನಡೆಯಲಿದೆ. ರ್ಯಾಲಿ ಪೂರ್ಣಗೊಂಡ ನಂತರ ಮಹಿಳಾ ಘಟಕದ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.