image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ...!

ನಾಳೆ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ...!

ಮಂಗಳೂರು: ಸಿಎಂ ಸಿದ್ದರಾಮಯ್ಯ ಜನವರಿ 17ರಂದು ದ.ಕ.ಜಿಲ್ಲಾ ಪ್ರವಾಸದಲ್ಲಿದ್ದಾರೆ. ಬೆಳಗ್ಗೆ 11.30ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಅವರು ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಆಗಮಿಸುವ ಅವರು, ಬೆಳಗ್ಗೆ 11.30ಕ್ಕೆ ಮೇರಿಹಿಲ್‌ನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮಂಗಳೂರಿನ ಪ್ರಾದೇಶಿಕ ಕೇಂದ್ರ ಕಚೇರಿ ಕಟ್ಟಡದ ಶಿಲಾನ್ಯಾಸ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 12.15ಕ್ಕೆ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವ- ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಂಜೆ 5ಗಂಟೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ಆಯೋಜನೆಗೊಂಡಿರುವ ಕರ್ನಾಟಕ ಕ್ರೀಡಾಕೂಟ-2025 ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 8ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Category
ಕರಾವಳಿ ತರಂಗಿಣಿ