ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳದ ಟೆಂಟ್ ಸಿಟಿಯಲ್ಲಿ ಎರಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಕೆಲವೇ ಕ್ಷಣದಲ್ಲಿ ಅಕ್ಕಪಕ್ಕದ ಡೇರೆಗಳಿಗೂ ಅಗ್ನಿ ಜ್ವಾಲೆ ವ್ಯಾಪಿಸಿದೆ
ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2 ಸಿಲಿಂಡರ್ ಸಂಭವಿಸಿದ್ದು, ಹಲವು ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ సిబ్బంది ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಖಾರಾ ಪೊಲೀಸರು ತಿಳಿಸಿದ್ದಾರೆ.
ಬೆಂಕಿಬಿದ್ದ ಟೆಂಟ್‌ನಲ್ಲಿದ್ದ ಜನರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲಾಗಿದ್ದು, ಸದ್ಯ ಯಾವುದೇ ಸಾವು ನೋವಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ.