image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ; ಸಿದ್ದರಾಮಯ್ಯ

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ; ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಮನೆ ಆವರಣದಲ್ಲಿ ಇಂದು ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದೇ ವೇಳೆ, ಕೇಂದ್ರ ಸರ್ಕಾರ ರೈತರ ಹಲವು ದಿನದ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಕೃಷಿ, ಮಾರುಕಟ್ಟೆ ಹಾಗೂ ಇತರ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ ಎಂದರು.

ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬದವರೂ ಕೂಡ ಸಿರಿಧಾನ್ಯಗಳ ಕೃಷಿ ಮಾಡುತ್ತಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ