image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಇ - ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ - ಖಾತಾ

ಇ - ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ - ಖಾತಾ

ಬೆಂಗಳೂರು: ಇ-ಖಾತಾ ಇಲ್ಲದ ರಾಜ್ಯದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದೆ. ನಗರ ವ್ಯಾಪ್ತಿಯಲ್ಲಿ ಇ - ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ ನೀಡಲು ತೀರ್ಮಾನಿಸಲಾಗಿದೆ.

"ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ - ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

"ಸಿಎಂ ಸಿದ್ದರಾಮಯ್ಯನವರು ಜ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ" ಎಂದರು.

"ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ - ದಾಖಲೆ ಇರುವುದಿಲ್ಲ ಆ ಎಲ್ಲರಿಗೂ ಒನ್ ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದೇಶ ಹೊರಬಿದ್ದ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ - ಖಾತಾ ಮಾಡಿಕೊಡಬೇಕು" ಎಂದು ಸೂಚಿಸಲಾಗಿದೆ.

Category
ಕರಾವಳಿ ತರಂಗಿಣಿ