ಮಂಗಳೂರು: ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಹೇಳಿದರು. ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಹಿತಿಗಳು, ಬರಹಗಾರರು, ವಿದ್ವಾಂಸರನ್ನು ವಿಧಾನಸಭೆಗೆ ಹತ್ತಿರವಾಗಿಸುವ ಉದ್ದೇಶದಿಂದ ಸಾಹಿತ್ಯ ಉತ್ಸವ ಆಯೋಜಿಸಲಾಗುತ್ತಿದೆ. ಒಬ್ಬ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದ್ದು, ಭದ್ರತೆ ದೃಷ್ಟಿಯಿಂದ ವಿಶೇಷ ತಪಾಸಣಾ ವ್ಯವಸ್ಥೆ ಮಾಡುತ್ತೇವೆ. ಈ ಸಾಹಿತ್ಯ ಉತ್ಸವವನ್ನು ಪ್ರತಿ ವರ್ಷವೂ ಏರ್ಪಡಿಸಬೇಕು ಎಂಬುದು ನಮ್ಮ ಆಶಯ'. ಸುಮಾರು ನೂರೈವತ್ತಕ್ಕೂ ಹೆಚ್ಚಿನ ಸ್ಟಾಲ್ ಗಳಿಗೆ ಅವಕಾಶವಿರುತ್ತದೆ. ಜೊತೆಗೆ ಫುಡ್ ಪೆಸ್ಟ್ ಕೂಡ ಇರಲಿದ್ದು, ರಾಜ್ಯದ ಎಲ್ಲಾ ಭಾಗಗಳ ತಿಂಡಿ ತಿನಿಸುಗಳ ಸ್ಟಾಲ್ ಇರಲಿದೆ. ಎಲ್ಲಾ ಶಾಸಕರು ಗಳು ಇದರಲ್ಲಿ ಪಾಲ್ಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಫೆ.3ನೇ ತಾರೀಖಿನ ವರೆಗೆ ಆಯೋಜಿಸಲಾಗುತ್ತಿದೆ ಎಂದರು.