image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ

ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ

ಆಂಧ್ರಪ್ರದೇಶ: ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ ಕಂಪನಿಗಳ ನಾಲ್ವರನ್ನು ಬಂಧಿಸಿದೆ.

ಭೋಲೆ ಬಾಬಾ ಆರ್ಗ್ಯಾನಿಕ್ ಡೈರಿ ಪ್ರೈವೇಟ್ ಲಿಮಿಟೆಡ್‌ (ರೂರ್ಕಿ, ಉತ್ತರಾಖಂಡ) ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ಶ್ರೀವೈಷ್ಣವಿ ಡೈರಿ ಪ್ರೈವೇಟ್ ಲಿಮಿಟೆಡ್ (ಪೆನುಬಾಕ, ಶ್ರೀಕಾಳಹಸ್ತಿ) ಸಿಇಒ ಅಪೂರ್ವ ಚವ್ಡಾ ಹಾಗೂ ಮತ್ತು ಡಾ. ಎಆರ್ ಡೈರಿ (ದಿಂಡಿಗಲ್, ತಮಿಳುನಾಡು) ಎಂಡಿ ರಾಜು ರಾಜಶೇಖರನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ನಾಲ್ಕು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಎಂಬವರು ಭೋಲೆ ಬಾಬಾ ಡೈರಿಯವರು. ವೈಷ್ಣವಿ ಡೈರಿಯ ಅಪೂರ್ವ ಚವ್ಡಾ ಮತ್ತು ಎಆರ್ ಡೈರಿಯ (ರಾಜು) ರಾಜಶೇಖರನ್" ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮೂಲಗಳ ಪ್ರಕಾರ, ತುಪ್ಪ ಪೂರೈಕೆಯ ಪ್ರತಿ ಹಂತದಲ್ಲೂ ಗಂಭೀರ ನಿಯಮ ಉಲ್ಲಂಘನೆಯು ಎಸ್​​ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಹೀಗಾಗಿ, ನಾಲ್ವರನ್ನು ಬಂಧಿಸಲಾಗಿದೆ. ವೈಷ್ಣವಿ ಡೈರಿ ಅಧಿಕಾರಿಗಳು ದೇವಸ್ಥಾನಕ್ಕೆ ತುಪ್ಪ ಪೂರೈಸಲು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ, ಟೆಂಡರ್ ಪ್ರಕ್ರಿಯೆಯನ್ನು ತಿರುಚಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

Category
ಕರಾವಳಿ ತರಂಗಿಣಿ