image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿಯಲ್ಲಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಮಾಡಿರುವ ಗೋದಾಮಿನ ಮೇಲೆ ದಾಳಿ

ಹುಬ್ಬಳ್ಳಿಯಲ್ಲಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಮಾಡಿರುವ ಗೋದಾಮಿನ ಮೇಲೆ ದಾಳಿ

ಹುಬ್ಬಳ್ಳಿ : ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಟಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಹುಲಿಗೆಮ್ಮ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

ಹಳೇ ಹುಬ್ಬಳ್ಳಿಯ ಗಟ್ಟೂರು ಕ್ರಾಸ್ ಬಳಿ ಇರುವ ಆಹಾರ ಗೋದಾಮಿನಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಟಿಕ ಸಾಮಗ್ರಿಗಳಾದ ತೊಗರಿ ಬೇಳೆ, ಹೆಸರು ಕಾಳು, ಬೆಲ್ಲ, ಸಕ್ಕರೆ, ಗೋಧಿಹಿಟ್ಟನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಹೀಗಾಗಿ, ಕರ್ತವ್ಯಲೋಪ ಎಸಗಿರುವ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ.

ಪೌಷ್ಟಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಂಗನವಾಡಿಗೆ ಸರಬರಾಜು ಮಾಡಿರುವ ಸುಮಾರು 4 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳು ಪತ್ತೆಯಾಗಿದ್ದವು. ಸಾಮಗ್ರಿಗಳ ಅಕ್ರಮ ದಾಸ್ತಾನಿಗೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳಲು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದರ ಜೊತೆಗೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಪ್ರಕರಣದ ತನಿಖೆಗೆ ಜಿಲ್ಲಾ ಪಂಚಾಯತ್​​ನಿಂದ ತನಿಖಾ ತಂಡ ರಚನೆ ಮಾಡಲಾಗಿದೆ ಎಂದು ಧಾರವಾಡ ಜಿಪಂ ಸಿಇಒ ಭುವನೇಶ ಪಾಟೀಲ ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ