ಪ್ಲೋರಿಡಾ: ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲಿ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತರುವಲ್ಲಿ ಯಶಸ್ವಿಯಾಗಿದೆ. ಸ್ಪೇಸ್‌ಎಕ್ಸ್ ಕ್ಯೂ ಫ್ರೀಡಂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ ಹಾಗೂ ಬುಚ್ ವಿಲೋರ್ ಭೂಮಿಗೆ ಮರಳಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗಿನ ಜಾವ 3.27ರ ಸುಮಾರಿಗೆ ಫ್ಲೋರಿಡಾದ ಸಮುದ್ರದ ಮೇಲೆ ಬಂದಿಳಿದಿದ್ದಾರೆ. ಬಳಿಕ ನಾಸಾ ವಿಜ್ಞಾನಿಗಳ ತಂಡ ಸಮುದ್ರದಿಂದ ಸುರಕ್ಷಿತವಾಗಿ ನೌಕೆಯನ್ನು ದಡಕ್ಕೆ ಕರೆತರಲಾಯಿತು. ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ಬೆಳಿಗ್ಗೆ 10:35ಕ್ಕೆ ಫ್ರೀಡಂ ಡ್ರಾಗನ್ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟಿತು. ನಿಕ್ ಹೇಗ್, ಸುನಿತಾ ವಿಲಿಯಮ್ಸ್, ಬುಚ್ ವಿಲ್ನೋರ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೊರ್ಬುನೊವ್ ನೌಕೆಯಲ್ಲಿದ್ದರು. ಶೀಘ್ರದಲ್ಲೇ ನೌಕೆಯಿಂದ ಹೊರಬರಲಿರುವ ಸುನೀತಾ ವಿಲಿಯಮ್ಸ್ ಹಾಗೂ ಇತರ ಗಗನಯಾತ್ರಿಗಳ ತಪಾಸಣೆ ನಡೆಯಲಿದೆ.
ಗಗನಯಾತ್ರಿಗಳ ಆಗಮನ ಅಮೆರಿಕ, ಭಾರತ ಮಾತ್ರವಲ್ಲ, ಇದೀ ವಿಶ್ವವೇ ಸಂಭ್ರಮಿಸಿದೆ. ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲು ಭಾರತದ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಗಿತ್ತು. ಹಲವರು ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲು ಪ್ರಾರ್ಥಿಸಿದ್ದರು. ಇದೀಗ ಪ್ರಾರ್ಥನೆ ಫಲಿಸಿದೆ. ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಸುರಕ್ಷಿತವಾಗಿ ತಲುಪಿದ್ದಾರೆ.