ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ನಡೆದಿದ್ದು ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಇದೀಗ ಬಿಜೆಪಿಯ ಶಿಸ್ತು ಸಮಿತಿಯು 3ನೇ ಬಾರಿಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಹೌದು 6 ವರ್ಷಗಳ ಕಾಲ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯಿಂದ ಅವರನ್ನು ಉಚ್ಚಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕಾರಣ ಏನೆಂದರೆ ಪದೇಪದೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಯತ್ನಾಳ್ ಅವರಿಗೆ ಈಗಾಗಲೇ ಹಲವಾರು ಬಾರಿ ಶಿಸ್ತು ಸಮಿತಿಯು ನೋಟಿಸ್ ನೀಡಿತ್ತು. ಆದರೆ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ.