ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಎಲ್ಲರನ್ನೂ ಕಡೆಗಣಿಸಿ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಪತ್ರಿಕಾ ಪ್ರತಿನಿಧಿಗಳ ಜೊತೆ ಮಾತನಾಡಿ, ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಮಸೂದೆ ಜಾರಿ ವಿಚಾರದಲ್ಲಿ ವಕ್ಸ್‌ನಲ್ಲಿ ತಪ್ಪಾಗಿದ್ದರೆ ಅಥವಾ ಭೂಮಿ ದುರುಪಯೋಗ ಆಗಿದ್ದರೆ ಸರಿ, ಆದರೆ ಕಾನೂನಿಗೂ ಅದಕ್ಕೂ ಸಂಬಂಧ ಇಲ್ಲ. ಈ ಕಾನೂನು ಸಂವಿಧಾನ ವಿರೋಧಿಯಾಗಿದೆ. ವಕ್ಸ್ ವಿಚಾರ ಸೂಕ್ಷ್ಮವಾಗಿದ್ದು, ಇದರಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ರಾಜ್ಯದ ಭೂಮಿಯಲ್ಲಿ ಹಿಂದೂ ಧರ್ಮದ ಟ್ರಸ್ಟ್‌ಗಳು ಕೂಡ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಇದೆ. ವಕ್ಸ್ ಕೂಡ ಕೆಲವು ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಇದೆ. ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದರು.