image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಅಪಹರಿಸಿ, ಕೊಲೆ: ಪೊಲೀಸ್‌ ಎನ್​ಕೌಂಟರ್​ನಲ್ಲಿ ಆರೋಪಿ ಸಾವು

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಅಪಹರಿಸಿ, ಕೊಲೆ: ಪೊಲೀಸ್‌ ಎನ್​ಕೌಂಟರ್​ನಲ್ಲಿ ಆರೋಪಿ ಸಾವು

ಹುಬ್ಬಳ್ಳಿ: ಇಲ್ಲಿನ ಅಶೋಕ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ಬಿಹಾರದ ರಕ್ಷಿತ್​ ಕ್ರಾಂತಿ ಸಾವನ್ನಪ್ಪಿದ ಆರೋಪಿ ಎಂದು ಗುರುತಿಸಲಾಗಿದೆ.

ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ಹಲ್ಲೆಗೆ ಮುಂದಾಗಿದ್ದರಿಂದ ಗುಂಡು ಹಾರಿಸಲಾಯಿತು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್​ ಆಯುಕ್ತ ಎನ್​ ಶಶಿಕುಮಾರ್​ ತಿಳಿಸಿದ್ದರು.

ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, "ಮೃತ ಬಾಲಕಿಯ ಪೋಷಕರಿಂದ ದೂರು ಸ್ವೀಕರಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮೃತ ಬಾಲಕಿ ಕುಟುಂಬ ಕೊಪ್ಪಳ ಜಿಲ್ಲೆಯಿಂದ ಇಲ್ಲಿಗೆ ಬಂದಿದೆ. ಆಕೆಯ ತಾಯಿ ಮನೆಗೆಲಸ ಮತ್ತು ಬ್ಯೂಟಿ ಪಾರ್ಲರ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆಕೆಯ ತಂದೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಮನೆಗಳಲ್ಲಿ ಕೆಲಸಕ್ಕೆ ಹೋಗುವಾಗ ತಾಯಿ, ಬಾಲಕಿಯನ್ನು ಜೊತೆಗೆ ಕರೆದುಕೊಂಡು ಹೋಗಿದ್ದರು. ತಾಯಿ ಅಕ್ಕಪಕ್ಕದ ಮನೆಯಲ್ಲಿ ಕೆಲಸ ಮಾಡುವಾಗ ಒಂದು ಮನೆಯಲ್ಲಿ ಮಗುವನ್ನು ಬಿಟ್ಟಿದ್ದರು" ಎಂದು ಭಾನುವಾರ ಮಧ್ಯಾಹ್ನ ಮಾಹಿತಿ ನೀಡಿದ್ದರು.

ಬಾಲಕಿಯ ಸಾವಿಗೆ ಕಾರಣ ಏನು ಮತ್ತು ಆಕೆಯ ಮೇಲೆ ದೌರ್ಜನ್ಯ ನಡೆದಿದೆಯೇ ಎಂಬ ತನಿಖೆ ನಡೆಸಲಾಗುತ್ತದೆ" ಎಂದು ತಿಳಿಸಿದ್ದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಅಶೋಕನಗರ ಪೊಲೀಸ್​ ಠಾಣೆ ಎದುರು ಜಮಾಯಿಸಿ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಅಪರಾಧಿಗೆ ಕಾನೂನಿನಡಿ ಸರಿಯಾದ ಶಿಕ್ಷೆಯಾಗಬೇಕು. ನ್ಯಾಯಾಲಯದ ಆದೇಶಕ್ಕೆ ಕಾಯುತ್ತಾ ಕುಳಿತುಕೊಳ್ಳುವಂತೆ ಆಗಬಾರದು. ಕಾಯುತ್ತಾ ಕುಳಿತಂತೆ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ನ್ಯಾಯಾಲಯವೂ ಸರಿಯಾದ ಕ್ರಮ ತೆಗೆದುಕೊಳ್ಳಬೇಕು" ಎಂದು ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು ಘಟನೆಯನ್ನು ಖಂಡಿಸಿ ಧಾರವಾಡದಲ್ಲಿ ಹೇಳಿದ್ದರು.

Category
ಕರಾವಳಿ ತರಂಗಿಣಿ