image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.

1984 ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ  ವರದಿಯಲ್ಲಿ ಶೇ.90 ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8 ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ

ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

Category
ಕರಾವಳಿ ತರಂಗಿಣಿ