image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಿವೃತ್ತ ಅಧಿಕಾರಿ ಓಂಪ್ರಕಾಶ್ ಕೊಲೆ ಹಿಂದೆ ಪಿಎಫ್‌ಐ ಪಾತ್ರ ಇರುವ ಶಂಕೆ -ಮಾಜಿ DYSP ಅನುಪಮಾ ಶೆಣೈ

ನಿವೃತ್ತ ಅಧಿಕಾರಿ ಓಂಪ್ರಕಾಶ್ ಕೊಲೆ ಹಿಂದೆ ಪಿಎಫ್‌ಐ ಪಾತ್ರ ಇರುವ ಶಂಕೆ -ಮಾಜಿ DYSP ಅನುಪಮಾ ಶೆಣೈ

ಮಂಗಳೂರು: ನಿವೃತ್ತ ಡಿಜಿಪಿ ಮತ್ತು ಐಜಿಪಿ ಓಂಪ್ರಕಾಶ್ ರವರ ಕೊಲೆಯ ವಿಚಾರದಲ್ಲಿ ಪಿಎಫ್‌ಐ ಪಾತ್ರವಿರುವ ಬಗ್ಗೆ ಸಂಶಯ ಇರುವುದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸಂಶಯ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಓಂಪ್ರಕಾಶ್ ರವರ ಕೊಲೆಯ ವಿಚಾರದಲ್ಲಿ ಪಿಎಫ್‌ಐ ಪಾತ್ರವಿರುವ ಬಗ್ಗೆ ಸಂಶಯ ಇದ್ದು, ಈ ಕುರಿತು ಎನ್ ಐಎ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್, ಸ್ಪೀಕರ್ ಯು.ಟಿ. ಖಾದರ್ ಅವರ ಪಾತ್ರವಿದೆಯೇ ಎಂದು ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಓಂಪ್ರಕಾಶ್ ಅವರ ಪತ್ನಿ ಪಲ್ಲವಿ ಅವರನ್ನು ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು  ಆರೋಪಿಯಾಗಿ ಸಿಕ್ಕಿಸಿ ಹಾಕಿದ್ದಾರೆ. ಮೃತ ಓಂಪ್ರಕಾಶ್ ಅವರಿಗೆ ಪಿಎಫ್‌ಐ ನಂಟು ಇದೆ ಎಂದು ಪಲ್ಲವಿ ಅವರು ವಾಟ್ಸ್ ಆಪ್ ಗ್ರೂಪ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವಾಗ ಎಲ್ಲಾ ರೀತಿಯ ಕ್ರಿಮಿನಲ್ ಗಳ ಪರಿಚಯವಾಗುತ್ತದೆ. ಆದರೆ ನಿವೃತ್ತರಾದ ಬಳಿಕ ಯಾವ ರೀತಿಯ ಸಂಪರ್ಕವಿತ್ತು ಎಂಬುದು ತಿಳಿಯಬೇಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪೊಲೀಸ್‌ ಇಲಾಖೆಯಲ್ಲಿ ನಿಷೇಧಿತ ಉಗ್ರ ಸಂಘಟನೆಯಾದ ಪಿಎಫ್‌ಐ ಸದಸ್ಯರನ್ನು ನೇಮಕ ಮಾಡಲಾಗುತ್ತಿದೆಯೇ ಎಂದು ಕೂಡ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಓಂಪ್ರಕಾಶ್ ರವರ ಕೊಲೆ ಪ್ರಕರಣದಲ್ಲಿ ಯಾವ ರೀತಿ ಪಿಎಫ್‌ಐ ಸದಸ್ಯರ ಕೈವಾಡವಿದೆ ಎಂಬ ಬಗ್ಗೆ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿ ಪೊಲೀಸ್‌ ಡಿಜಿಪಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಗೆ ಪತ್ರ ಬರೆದಿದ್ದೇನೆ. ಇನ್ನಾದರೂ ಅಲ್ಪ ಸಂಖ್ಯಾತರ ಓಲೈಕೆಗಾಗಿ ದಲಿತ ಸಮುದಾಯಕ್ಕೆ ಸೇರಿದ ಪೊಲೀಸ್‌ ಅಧಿಕಾರಿಗಳನ್ನು, ಅವರ ಮನೆಯ ಮಹಿಳೆಯರನ್ನು ಬಲಿ ನೀಡುವುದನ್ನು ನಿಲ್ಲಿಸಿರಿ ಎಂದು ಮುಖ್ಯಮಂತ್ರಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ವಿನಂತಿಸಿದ್ದಾರೆ.

Category
ಕರಾವಳಿ ತರಂಗಿಣಿ