ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾದ್ಯಮ ಜೊತೆ ಮಾತನಾಡಿದ ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.