ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಪ್ಪಿಸಲು ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದು. ಇದು ಯಾರು ಕಮ್ಯೂನಲ್ ಚಟುವಟಿಕೆಗಳನ್ನು ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಹಾಗೂ ಪ್ರಚೋದನಕಾರಿ ಭಾಷಣ ಮಾಡುತ್ತಾರೋ ಅವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವುದಕ್ಕೆ ಈ ಪಡೆಯ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನಡಲಾಗುತ್ತಿದೆ ಎಂದುಪರಮೇಶ್ವರ ತಿಳಿಸಿದರು. ಅವರು ನಗರದ ಪೋಲಿಸ್ ಆಯುಕ್ತರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾರು communal activity ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಈ ಪಡೆಗೆ ಅಧಿಕಾರವನ್ನು ಕೊಡಲಾಗುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕಾರ್ಯಪಡೆಯನ್ನು ರಚಿಸಲಾಗುವುದು. ರಾಜ್ಯದಲ್ಲಿ ಯಾರು ಪ್ರಚೋದನೆ ಭಾಷಣಗಳನ್ನು ಮಾಡುತ್ತಾರೋ ಅಂಥವರ ಮೇಲೆ ಕಾನೂನು ಪ್ರಕಾರ ನಿರ್ದಾಕ್ಷಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ ಎಂದರು.
ಕಾರ್ಕಳದಲ್ಲಿ ಈಗಾಗಲೇ ಇರುವ ಆಂಟಿ ನಕ್ಸಲ್ ಕಾರ್ಯಪಡೆಯನ್ನು ಇದೀಗ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಂಟಿ ಟಾಸ್ಕಸ್ಕ್ ಫೋರ್ಸ್ ಆಗಿ ಮಾಡಲಾಗುವುದು. ಇದೀಗ ರಾಜ್ಯದಲ್ಲಿ ಎಲ್ಲಾ ನಕ್ಸಲ್ ಚಟುವಟಿಕೆ ಸಂಪೂರ್ಣವಾಗಿ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಕ್ಸಲ್ ನಿಗ್ರಹ ಪಡೆಯನ್ನು ರದ್ದುಗೊಳಿಸಿ, ಅದರಲ್ಲಿರುವ ಅಧಿಕಾರಿಗಳನ್ನೇ ಕೋಮುವಾದಿ ನಿಗ್ರಹ ದಳವನ್ನಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಒಂದು ಕಾಲದಲ್ಲಿ ಕರಾವಳಿ ಹಾಗೂ ದಕ್ಷಣ ಕನ್ನಡ ಜಿಲ್ಲೆಗೆ ಶಾಂತಿ ನೆಲೆಸಿದ ಸ್ಥಳ ಎಂದು ಇಲ್ಲಿಗೆ ಹುಡುಕಿಕೊಂಡು ಬರುತ್ತಿದ್ದರು. ಅದೇ ರೀತಿ ಇನ್ನು ಮುಂದಿನ ದಿನಗಳಲ್ಲಿಯೂ ದಕ್ಷಿಣ ಕನ್ನಡವನ್ನು ಶಾಂತಿಯುತ ಜಿಲ್ಲೆಯನ್ನಾಗಿ ಕಾಪಾಡುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.