ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ 50 ಲಕ್ಷ ರೂಪಾಯಿಗೂ ಅಧಿಕ ಹಣ ಫಂಡಿಂಗ್ ಆಗಿದೆ. ಪಿಎಫ್‌ಐ ನಡೆಸುತ್ತಿರುವ ಟಾರ್ಗೆಟೆಡ್ ಕಿಲ್ಲಿಂಗ್ ಮಾದರಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ವಹಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ. ಉಲ್ಲಾಸ್ ಆಗ್ರಹಿಸಿದ್ದಾರೆ. ನಗರದ ವಿ ಎಚ್ ಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಪ್ರಕರಣದಲ್ಲಿ ನೈಜ ಅಪರಾದಿಗಳನ್ನು ಬಂಧಿಸಿದ್ದಾರೆಯೇ ಎಂಬ ಬಗ್ಗೆ ಸಂಶಯವಿದೆ. ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಮಾತ್ರ ಸುಹಾಸ್ ಹತ್ಯೆ ನಡೆಸಿಲ್ಲ. ಫಾಝಿಲ್ ಸಹೋದರ ಮಾತ್ರ ಕೊಲೆಗೆ ಸುಪಾರಿ ನೀಡಿಲ್ಲ. ಕೆಲ ದುಷ್ಟಶಕ್ತಿಗಳು ಸುಹಾಸ್ ಕೊಲೆಗೆ 50 ಲಕ್ಷ ರೂ. ಸಂಗ್ರಹಿಸಿರುವ ಮಾಹಿತಿಯಿದೆ ಎಂದು ಹೇಳಿದರು. ಕುಡುಪುವಿನಲ್ಲಿ ಅಶ್ರಫ್ ಎಂಬಾತನ ಕೊಲೆ ನಡೆದ ಮೂರು ದಿನದಲ್ಲಿ ಪಿಎಫ್‌ಐ ಮಾದರಿಯಲ್ಲಿ ಈ ಕೊಲೆ ನಡೆಸಲಾಗಿದೆ. ಕೊಲೆ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ತೆರಳಲು ಯಾವುದೇ ಆತುರ ಇರಲಿಲ್ಲ. ಸುಹಾಸ್ ಸಾವಿನ ಬಗ್ಗೆ ಖಾತ್ರಿಯಾದ ಬಳಿಕ ಆರೋಪಿಗಳು ಆರಾಮವಾಗಿ ಸ್ಥಳದಿಂದ ತೆರಳಿದ್ದಾರೆ.
ಯಾರ ಸಹಕಾರದಿಂದ ಈ ಹತ್ಯೆ ನಡೆದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸಬೇಕು ಎಂದು ಆಗ್ರಹಿದರು.