image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಲ್ಲಿ ಮತ್ತೊಂದು ದರೋಡೆ ಪ್ರಕರಣ : ಇದು ಪೋಲಿಸ್ ಮತ್ತು ನಾಗರಿಕರಿಗೆ ಎಚ್ಚರಿಕೆ ಗಂಟೆಯೇ?

ಮಂಗಳೂರಲ್ಲಿ ಮತ್ತೊಂದು ದರೋಡೆ ಪ್ರಕರಣ : ಇದು ಪೋಲಿಸ್ ಮತ್ತು ನಾಗರಿಕರಿಗೆ ಎಚ್ಚರಿಕೆ ಗಂಟೆಯೇ?

ಮಂಗಳೂರು:  ನಗರದ ಉಲಾಯಿ ಬೆಟ್ಟು ವ್ಯಾಪ್ತಿಯಲ್ಲಿ ನಡೆದ ದರೋಡೆಯ ಆರೋಪಿಗಳೆಲ್ಲ ಬಂದನವಾಗುವ ಮೊದಲೇ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. 

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಮನೆಯಲ್ಲಿದ್ದವರಿಗೆ ಹಲ್ಲೆ ನಡೆಸಿ ದರೋಡೆ ಮಾಡಿ ಬಳಿಕ ನಾಲ್ಕು ಮಂದಿ ಇದ್ದ ತಂಡ ಮನೆ ಮಾಲೀಕರ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಮನೆ ಮಾಲೀಕ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಉಡುಪಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತಲಿನ ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Category
ಕರಾವಳಿ ತರಂಗಿಣಿ