image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತು

ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತು

ನವದೆಹಲಿ: ಭಾರತೀಯ ಸೇನಾಪಡೆಗಳು ನಡೆಸಿದ ಆಪರೇಷನ್​​ ಸಿಂಧೂರ್​​​​​​ ಕಾರ್ಯಾಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್​ ಪ್ರಾರಂಭಿಸಿದ ನಂತರ ಪ್ರಧಾನಿ ಮೋದಿಯವರ ಮೊದಲ ಭಾಷಣ ಇದಾಗಿದೆ. ಪ್ರಧಾನಿ ಮೋದಿ ಏನು ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಭಾರತ ಮಾತ್ರವಲ್ಲದೇ ಇಡೀ ವಿಶ್ವದ ಗಮನವಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಆಪರೇಷನ್ ಸಿಂಧೂರ್​ ಹೆಸರಿನಲ್ಲಿ ಭಾರತೀಯ ಸೇನೆ ಪ್ರಾರಂಭಿಸಿದ ಕಾರ್ಯಾಚರಣೆಯಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಇದರ ನಡುವೆ ಮೇ 10ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳೂ ಕದನ ವಿರಾಮಕ್ಕೆ ನಿರ್ಧರಿಸಿದ್ದವು.

ಆಪರೇಷನ್ ಸಿಂಧೂರ್​ ಪ್ರಾರಂಭಿಸಿದಾಗಿನಿಂದ ಪ್ರಧಾನಿ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು, ಸಿಡಿಎಸ್​ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದರು.

Category
ಕರಾವಳಿ ತರಂಗಿಣಿ