image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ಪ್ರಜಾಸೌಧ' ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

'ಪ್ರಜಾಸೌಧ' ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ 'ಪ್ರಜಾಸೌಧ'ವನ್ನು ಮೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಮೂರು ಮಹಡಿಗಳ ಸಂಕೀರ್ಣವು ಒಟ್ಟು 253159.67 ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಸಂಕೀರ್ಣ 75 ಕೋಟಿರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ತಳ ಮಹಡಿಯಲ್ಲಿ ಮಂಗಳೂರು ಒನ್ ಕಚೇರಿ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ, ಅಂಚೆ ಕಚೇರಿ, ಪೊಲೀಸ್ ಚೌಕಿ, ಕ್ಯಾಂಟೀನ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ, ಬ್ಯಾಂಕ್, ಖಜಾನೆ ಮತ್ತು ಭದ್ರತಾ ಕೊಠಡಿ, ಜಿಲ್ಲಾ ಆರೋಗ್ಯ ಕೇಂದ್ರ, ದಾಸ್ತಾನು ಕೊಠಡಿಯನ್ನು ಹೊಂದಿರಲಿದೆ. ನೆಲ ಮಹಡಿಯಲ್ಲಿ ಮಾಹಿತಿ ಕೇಂದ್ರ, ಸಾರ್ವಜನಿಕ ಸಂಪರ್ಕ ಕೇಂದ್ರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ., ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಸಂಸದ ಕ್ಯಾಬಿನ್, ಉಳ್ಳಾಲ ಶಾಸಕರ ಕ್ಯಾಬಿನ್, ಜಿಲ್ಲಾ ಉಸ್ತುವಾರಿ ಸಚಿವರ ಕ್ಯಾಬಿನ್, ಜಿಲ್ಲಾ ನೋಂದಣಾಧಿಕಾರಿ ಹಾಗೂ ಮುದ್ರಾಂಕಗಳ ಉಪ ಆಯುಕ್ತರ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹೆಚ್ಚುವರಿ ಕ್ಯಾಬಿನ್, ಜಿಲ್ಲಾಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಖಜಾನೆ, ಜಿಲ್ಲಾ ಅಂತರ್ಜಲ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿಗಳನ್ನು ಹೊಂದಿರಲಿದೆ. ಪ್ರಥಮ ಮಹಡಿಯಲ್ಲಿ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ, ಕಂದಾಯ ಶಾಖೆ, ದಾಸ್ತಾನು ಕೊಠಡಿ, ಭೂಮಿ ಶಾಖೆ, ಕೆಎಸ್.ಡಬ್ಲ್ಯು.ಎ.ಎನ್., ರಾಷ್ಟ್ರೀಯ ಮಾಹಿತಿ ಕೇಂದ್ರ, ಆಡಳಿತ ಶಾಖೆ, ಅಪರ ಜಿಲ್ಲಾಧಿಕಾರಿ ಕಚೇರಿ, ಸಭಾಂಗಣ, ಜಿಲ್ಲಾಧಿಕಾರಿ ಕೊಠಡಿ, ಜಿಲ್ಲಾಧಿಕಾರಿ ನ್ಯಾಯಾಲಯ, ದಂಡನಾ ಶಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮುಜರಾಯಿ ತಹಶೀಲ್ದಾರರು, ಮುಜರಾಯಿ ಶಾಖೆ, ತೀರಿಕೆ ಶಾಖೆ (ಕ್ಲಿಯರೆನ್ಸ್ ಸೆಕ್ಷನ್), ಜಿಲ್ಲಾ ನಗರಾಭಿವೃದ್ಧಿ ಕೋಶ, ಚುನಾವಣಾ ಶಾಖೆ, ಕನೂನು ಶಾಖೆ, ಕೊಠಡಿ, ಶಿಷ್ಟಾಚಾರ ಶಾಖೆ ಕೊಠಡಿಗಳನ್ನು ಹೊಂದಿದೆ. ಎರಡನೇ ಮಹಡಿಯಲ್ಲಿ ಕರ್ನಾಟಕ ಸರಕಾರಿ ವಿಮಾ ಇಲಾಖೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಖಾದಿ ಮತ್ತುಗ್ರಾಮೋದ್ಯೋಗ ಮಂಡಳಿ, ಅಭಿಲೇಖಾಲಯ, ಒಳಮುಖ ಹೊರಮುಖ ವಿಭಾಗ, ಅಭಿಲೇಖಾಲಯ- ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರಕಾರಿ ವಿಮಾ ಇಲಾಖೆ, ಪಿಂಚಣಿ- ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ, ಅರಣ್ಯ ಜೀವಸ್ಥಿತಿ ಮತ್ತು ಪರಿಸರ ಇಲಾಖೆ, ಹಿಂದೂ ಧಾರ್ಮಿಕ ದತ್ತಿ ಅಭಿಲೇಖಾಲಯ, ನಿರ್ಮಿತಿ ಕೇಂದ್ರ, ಅರಣ್ಯ ವ್ಯವಸ್ಥಾಪನಾಧಿಕಾರಿಯವರ ಕಚೇರಿ, ಸಭಾಂಗಣ, ದಾಸ್ತಾನು ಕೊಠಡಿಯನ್ನು ಹೊಂದಿರಲಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

Category
ಕರಾವಳಿ ತರಂಗಿಣಿ