ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಇಂದು ರಾತ್ರಿ ಬಂಧಿಸಿರುವ ಘಟನೆ ನಡೆದಿದೆ.
ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದು, ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿ, ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಠಾಣೆ ಆವರಣದಿಂದ ಚದುರಿಸಿದ್ದು,ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಳಾಗಿದೆ.