ಮಂಗಳೂರು: ಮೆಸ್ಕಾಂ ಮೂಡಬಿದ್ರೆ ಉಪವಿಭಾಗ ಕಚೇರಿಯಲ್ಲಿ ಸೆ.6 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎ೦ದು ಮೆಸ್ಕಾ೦ ಪ್ರಕಟನೆಯಲ್ಲಿ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08258-295051.