image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್‌: ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್‌: ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಪುತ್ತೂರಿನ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರುವ ಮಾಡುವ ಆದೇಶ ಹೊರಡಿಸುವ ಕುರಿತು ಜೂನ್ 6ರಂದು ವಿಚಾರಣೆಗೆ ಹಾಜರಾಗಲು ಪುತ್ತೂರು ಉಪವಿಭಾಗದ ದಂಡಾಧಿಕಾರಿಯಾದ ಸಹಾಯಕ ಆಯುಕ್ತರು ನೋಟಿಸ್‌ ಜಾರಿಗೊಳಿಸಿದ್ದಾರೆ. ಕರ್ನಾಟಕ ಪೊಲೀಸ್‌ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್ ವಿವರ

ಅರುಣ್ ಕುಮಾ‌ರ್ ಪುತ್ತಿಲ ಪ್ರಾಯ: 54 ವರ್ಷ ತಂದೆ: ಕೃಷ್ಣಯ್ಯ ವಾಸ: ಮತ್ತಿಲ ಮನೆ ಮುಂಡೂರು ಗ್ರಾಮ ಪುತ್ತೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್‌ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 6ರಂದು ನಿಗದಿಪಡಿಸಿದೆ. ಆದ್ದರಿಂದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಪ್ರಕರಣದಲ್ಲಿ ನೀವು ಸ್ವತಃ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ವಿಚಾರಣೆಗೆ ಹಾಜರಾಗದಿದ್ದಲ್ಲಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

Category
ಕರಾವಳಿ ತರಂಗಿಣಿ