image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಕೊಳ್ತಮಜಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಜರಂಗದಳ ಪ್ರಮುಖರಾದ ಭರತ್ ಕುಮ್ಡೇಲ್ ರವರನ್ನು ಸಿಲುಕಿಸುವ ಹುನ್ನಾರ - ವಿ ಎಚ್ ಪಿಯಿಂದ ಪ್ರತಿಭಟನೆಯ ಎಚ್ಚರಿಕೆ

ಬಂಟ್ವಾಳ ಕೊಳ್ತಮಜಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಜರಂಗದಳ ಪ್ರಮುಖರಾದ ಭರತ್ ಕುಮ್ಡೇಲ್ ರವರನ್ನು ಸಿಲುಕಿಸುವ ಹುನ್ನಾರ - ವಿ ಎಚ್ ಪಿಯಿಂದ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ಬಂಟ್ವಾಳ ಕೊಳ್ತಮಜಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಭರತ್ ಕುಮ್ಡೇಲ್  ಅವರನ್ನು ಸಿಲುಕಿಸಲು ಪೊಲೀಸ್ ಇಲಾಖೆ ಪ್ರಯತ್ನಿಸುತ್ತಿದೆ. ಈಗಾಗಲೇ ಭರತ್ ಕುಮ್ಡೆಲ್ ರವರ ಮನೆಯ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ. ಮುಸ್ಲಿಮರ ಒತ್ತಡಕ್ಕೆ ಮಣಿದು ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿ ಹಿಂದೂ ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹತ್ಯೆ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರವನ್ನು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ಭಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಹೇಳಿದರು. ಅವರು ನಗರದ ವಿಶ್ವಶ್ರೀಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಮುಸ್ಲಿಂ ಓಟಿಗೋಸ್ಕರ ಬಜರಂಗದಳವನ್ನು ನಿಷೇಧ ಮಾಡಲು ಹೊರಟ ಕಾಂಗ್ರೆಸ್ ಸರಕಾರ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ರಾಜ್ಯದಾದ್ಯಂತ ಕಾರ್ಯಕರ್ತರು, ಸಂಘಟನೆಯ ಪ್ರಮುಖರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಸಂಘಟನೆಯ ಹೆಸರನ್ನು ಕೆಡಿಸುವ ಪ್ರಯತ್ನವನ್ನು ಮಾಡುತ್ತಿದೆ. ಮುಂದುವರಿದ ಭಾಗವಾಗಿ ಕರಾವಳಿಯ ಭಾಗದಲ್ಲಿ ಬಜರಂಗದಳವನ್ನು ಗುರಿಯಾಗಿಟ್ಟುಕೊಂಡು ಕಾರ್ಯಕರ್ತರ ಮೇಲೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಪ್ರಕರಣಗಳನ್ನು ದಾಖಲಿಸುವುದು, ರೌಡಿ ಶೀಟರ್ ಪಟ್ಟಿಯಲ್ಲಿ ಹೆಸರನ್ನು ಸೇರಿಸುವುದು ಗೂಂಡಾ ಕಾಯ್ದೆ ಹಾಕುವುದು ಇದೀಗ ಹತ್ಯೆ ಪ್ರಕರಣದಲ್ಲಿ ಬಜರಂಗದಳದ ಪ್ರಮುಖರಾದ ಭರತ್ ಕುಮ್ಡೇಲ್ ರವರನ್ನು ಸೇರಿಸುತ್ತಿರುವುದು ಕಂಡುಬರುತ್ತಿದೆ. ಬಜರಂಗದಳ ರಾಷ್ಟ್ರ ಭಕ್ತ ಸಾಮಾಜಿಕ ಸಂಘಟನೆಯಾಗಿದ್ದು, ನೂರಾರು ಸೇವಾ ಚಟುವಟಿಕೆಗಳು ಸಾವಿರಾರು ಗೋವುಗಳ ರಕ್ಷಣೆ, ಹೆಣ್ಣು ಮಕ್ಕಳ ರಕ್ಷಣೆ, ಮುಂತಾದ ಹತ್ತಾರು ಕಾರ್ಯಗಳನ್ನು ಮಾಡಿಕೊಂಡು, ಕಾನೂನು ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿರುವ ಸಂಘಟನೆಯಾಗಿದೆ. ಇಂತಹ  ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿ ದಬ್ಬಾಳಿಕೆ ಮಾಡುವುದು ಸರಿಯಲ್ಲ, ನಿಮ್ಮ ಹಿಂದೂ ವಿರೋಧಿ ಧೋರಣೆಯನ್ನು ಇಡೀ ಹಿಂದೂ ಸಮಾಜ ವಿರೋಧಿಸುತ್ತದೆ ಎಂದರು.  ಭರತ್ ಕುಮ್ಡೇಲ್ ರವರನ್ನು ಈ ಪ್ರಕರಣದಲ್ಲಿ ಸೇರಿಸಿದಲ್ಲಿ ಎಲ್ಲಾ ಜಿಲ್ಲಾ ಕೇಂದ್ರ ಗ್ರಾಮ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಜಿಲ್ಲಾಡಳಿತಕ್ಕೆ ನೀಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭುಜಂಗ ಕುಲಾಲ್,  ನವೀನ್ ಮೂಡುಶೆಡ್ಡೆ ಮತ್ತು ಪುನೀತ್ ಅತ್ತಾವರ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ